

ಚಿತ್ರದುರ್ಗ: ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಡಿ.9ರಂದು ಸಂಜೆ 4ಕ್ಕೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ-2024 ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್‌ಕುಮಾರ್ ಬಂಡಾರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಜೆ. ಕುಮಾರಸ್ವಾಮಿ ಉದ್ಘಾಟಿಸುವರು. ಗೃಹರಕ್ಷಕ ದಳ ಜಿಲ್ಲಾ ಸಮಾದೇಷ್ಟರಾದ ಸಿ.ಕೆ. ಸಂಧ್ಯಾ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
======