9ರಂದು ಕಣ್ಣಿನ ತಪಾಸಣಾ ಶಿಬಿರ

Published on

ಚಾಮರಾಜನಗರ: ಕೊಳ್ಳೇಗಾಲದ ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ ಆವರಣದಲ್ಲಿ ಫೆ.9 ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ, ಎಚ್.ಕೆ.ಕೃಷ್ಣಸ್ವಾಮಿ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ವಿಶ್ವ ಚೇತನ ಸಮೂಹ ವಿದ್ಯಾಸಂಸ್ಥೆ, ರೋಟರಿ ಮಿಡ್‌ಟೌನ್, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಲಯನ್ಸ್ ಕ್ಲಬ್ ಆ್ ಈರೋಡ್ ಕಾವೇರಿ ಟ್ರಸ್ಟ್ ಸಹಯೋಗದಲ್ಲಿ ಅಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 12.30ವರೆಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಕಣ್ಣಿನ ಸಮಸ್ಯೆಗಳಿಗೆ ಸಂಬಂಧಿಸಿದ ತಪಾಸಣೆ ಮಾಡಲಾಗುವುದು ಎಂದು ಎಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net