ಪ್ರವೀಣ್​ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಬಿಜೆಪಿ ನಿರ್ಧಾರ

Praveen 3
Published on

ಬೆಂಗಳೂರು: ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರದ ಜತೆಗೆ ಮನೆ ನಿರ್ಮಿಸಿಕೊಡಲು ರಾಜ್ಯ ಬಿಜೆಪಿ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಪ್ರವೀಣ್​ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ರೂಪಾಯಿ ನೀಡಲಾಗುವುದು ಎಂದರು.

ಚುನಾವಣೆ ಸಂದರ್ಭದಲ್ಲಿ ಕೋಮು ಗಲಭೆ ಹಬ್ಬಿಸುವುದು. ಇದರಲ್ಲಿ ಜಿಹಾದಿ ಶಕ್ತಿಗಳನ್ನು ಒಳಗೊಳ್ಳುವುದು ಗಮನಿಸಿದ್ದು, ಸರ್ಕಾರ ನಿರ್ದಾಕ್ಷಿಣ್ಯವಾಗಿ ದಮನ ಮಾಡಲಿದೆ. ಅಗತ್ಯಬಿದ್ದರೆ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಒಪ್ಪಿಸಬೇಕು ಎಂದಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ವೈಯಕ್ತಿಕವಾಗಿ ಪ್ರವೀಣ್​ ಕುಟುಂಬಕ್ಕೆ 10 ಲಕ್ಷ ರೂ. ನೆರವು ನೀಡುವುದಾಗಿ ತಿಳಿಸಿದ್ದಾರೆ. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ. ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರ್ಕಾರಕ್ಕಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net