ಗ್ರಾಮ ಹೊರವಲಯದಲ್ಲಿ ಅನುಮಾನಾಸ್ಪದವಾಗಿ 3 ಚಿರತೆಗಳ ಸಾವು!

cheetha
Published on

ಮೈಸೂರು: ಬೆಳವಾಡಿ ಗ್ರಾಮದ ಹೊರವಲಯದಲ್ಲಿ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

ಬೆಳವಾಡಿ ಗ್ರಾಮ ಹೊರವಲಯದಲ್ಲಿ ಮೂರು ಚಿರತೆಗಳ ಕಳೇಬರ ಪತ್ತೆಯಾಗಿದ್ದು, ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಚಿರತೆಗಳ ಕಳೇಬರಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net