ರಾಜ್ಯದಲ್ಲಿ ಇನ್ನೂ 4 ದಿನ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

Rain
Published on

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಬುಧವಾರವೂ ವಿವಿಧ ಭಾಗಗಳಲ್ಲಿ ಸುರಿದಿದ್ದು, ದಕ್ಷಿಣ ಕನ್ನಡ, ಮಂಗಳೂರು, ಧರ್ಮಸ್ಥಳ, ಪೆಣಂಬೂರು, ಉಪ್ಪಿನಂಗಡಿ, ಕಾರ್ಕಳ, ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ಸರಾಸರಿ 10 ಸೆಂ.ಮೀ. ಮಳೆಯಾಗಿದೆ.

ಶಿವಮೊಗ್ಗ, ಹಾಸನದಲ್ಲಿ ಆ.25ರಂದು, ಚಿಕ್ಕಮಗಳೂರು, ಕೊಡಗಿನಲ್ಲಿ ಆ.26ರಿಂದ ಮುಂದಿನ 2 ದಿನ ಹಾಗೂ ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಆ.28ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದುರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗದ ಇತರೆ ಜಿಲ್ಲೆಗಳಲ್ಲಿ ಆಗಾಗ್ಗೆ ಚದುರಿದಂತೆ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಜೂ.1ರಿಂದ ಆ.24ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 654 ಮಿ.ಮೀ. ಮಳೆ ಆಗಬೇಕಿತ್ತು. ಆದರೆ, 760 ಮಿ.ಮೀ. ಮಳೆಯಾಗಿದ್ದು, ಶೇ.16 ಹೆಚ್ಚು ಸುರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net