

ಯಾದಗಿರಿ: ದನಗಳಿಗೆ ನೀರು ಕುಡಿಸಲು ಮನೆ ಮುಂದೆ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು 6 ವರ್ಷದ ಬಾಲಕ ಮೃತಪಟ್ಟ ಘಟನೆ ವಡಗೇರಾ ತಾಲೂಕಿನ ಗಡ್ಡೆಸೂಗುರು ಗ್ರಾಮದಲ್ಲಿ ಸಂಭವಿಸಿದೆ.
ಗಡ್ಡೆಸೂಗುರು ಗ್ರಾಮದ ಹಣಮಂತ ಕುಲಕರ್ಣಿ ಅವರ ಮಗ ಸುದೀಪ್ ಮೃತ ದುರ್ದೈವಿ. ಭಾನುವಾರ ಸಂಜೆ ಮನೆ ಮುಂದೆಯೇ ಆಟವಾಡುತ್ತಿದ್ದ ಸುದೀಪ್, ನೀರಿನ ತೊಟ್ಟಿಯಲ್ಲಿ ಬಿದ್ದು ದುರಂತ ಅಂತ್ಯ ಕಂಡಿದ್ದಾನೆ.
ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.