

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಅಧಿವೇಶನದ ಮೊದಲ ದಿನವೇ ಕಾಂಗ್ರೆಸ್ ಶಾಸಕರು ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡರು.
ಹಿಜಾಬ್ ವಿಷಯ ಮುಂದಿಟ್ಟುಕೊಂಡು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ, ಈ ಕೂಡಲೇ ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಶಾಲೆಗೆ ಬರಲು ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ಶಾಸಕರು ಆಗ್ರಹಿಸುತ್ತಾ ಕಪ್ಪುಪಟ್ಟಿ ಧರಿಸಿ ಸಾಂಕೇತಿ ಪ್ರತಿಭಟನೆ ನಡೆಸಿ ಕಲಾಪದಲ್ಲಿ ಪಾಲ್ಗೊಂಡರು.
ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ ಫಾತಿಮಾ ಹಿಜಾಬ್ ಧರಿಸಿಕೊಂಡೇ ಕಲಾಪದಲ್ಲಿ ಪಾಲ್ಗೊಂಡರು.