ರಾಜ್ಯದ 5 ಕಡೆ ರಿಂಗಣಿಸಿದ ಸ್ಯಾಟಲೈಟ್ ಫೋನ್! ಕರಾವಳಿ ಮತ್ತು ಮಲೆನಾಡಲ್ಲಿ ಹೈ ಅಲರ್ಟ್​

satellite
Published on

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸ್ಯಾಟಲೈಟ್ ಫೋನ್ ಮತ್ತೊಮ್ಮೆ ರಿಂಗಣಿಸಿದ್ದು, ಗುಪ್ತಚರ ಇಲಾಖೆ ಹೈ ಅಲರ್ಟ್​ ಘೋಷಿಸಿದೆ.

ರಾಜ್ಯದ ಕರಾವಳಿಯಲ್ಲಿ ಕೇಂದ್ರ ಗುಪ್ತಚರ ಸಂಸ್ಥೆಯ ಹೈ ಅಲರ್ಟ್ ಸೂಚನೆ ನಡುವೆಯೂ ಸ್ಯಾಟಲೈಟ್ ಫೋನ್​ ಆ್ಯಕ್ಟಿವ್​ ಆಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಗುಡ್ಡಗಾಡು ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆದಿರುವ ಬಗ್ಗೆ ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು ಮಾಹಿತಿ ಕಲೆಹಾಕುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಕಡೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದ ಒಂದು ಕಡೆ ಸ್ಯಾಟಲೈಟ್ ಫೋನ್ ಆ್ಯಕ್ಟಿವ್​​ ಆಗಿರುವುದು ಗೊತ್ತಾಗಿದೆ. ರಾಜ್ಯದ 5 ಕಡೆ ಸ್ಯಾಟಲೈಟ್ ಫೋನ್ ಮೂಲಕ ನಿಗೂಢ ವ್ಯಕ್ತಿಗಳು ಸಂಪರ್ಕ ಸಾಧಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ಚುರುಕುಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net