ಜಯಲಲಿತಾ ಆಪ್ತೆ ಶಶಿಕಲಾಗೆ ವಿಐಪಿ ಸೌಲಭ್ಯ ಕೇಸ್​: ಹಿಂಡಲಗಾ ಜೈಲು ಅಧೀಕ್ಷಕರ ಮನೆ ಮೇಲೆ ಎಸಿಬಿ ದಾಳಿ

krishnakumar
Published on

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದ ಅಧೀಕ್ಷಕ ಕೃಷ್ಣಕುಮಾರ್​ ನಿವಾಸದ ಮೇಲೆ ಬೆಂಗಳೂರು ಎಸಿಬಿ ಅಧಿಕಾರಿಗಳ ತಂಡ ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.

ಹಿಂಡಲಗಾ ಜೈಲಿನ ವಸತಿಗೃಹಕ್ಕೆ ಆಗಮಿಸಿದ ಎಸಿಬಿ ತಂಡ, ಸ್ಥಳೀಯ ಅಧಿಕಾರಿಗಳ ಜತೆ ಸೇರಿ ಕಾರ್ಯಾಚರಣೆ ಆರಂಭಿಸಿದೆ. ಹಿಂಡಲಗಾ ಅಧೀಕ್ಷಕ ಕೃಷ್ಣಕುಮಾರ್​, ಇದನ್ನೂ ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ವಿಐಪಿ ಸೌಲಭ್ಯ ಕಲ್ಪಿಸಿರುವ ಬಗ್ಗೆ ಐಪಿಎಸ್ ಅಧಿಕಾರಿ ಡಿ.ರೂಪಾ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ‌ ತಂಡ ವಿಚಾರಣೆಗೆ ಆಗಮಿಸಿದೆ. ನಾವು ಇಲ್ಲಿನ ಮಾಹಿತಿ ನೀಡುತ್ತಿದ್ದೇವೆ ಎಂದು ಬೆಳಗಾವಿಯ ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net