

ಬೆಂಗಳೂರು: ಮಂಡ್ಯ ಮೂಲದ ಯುವನಟ ಸತೀಶ್ ವಜ್ರ ಅವರನ್ನು ಶುಕ್ರವಾರ ರಾತ್ರಿ ಕೊಲೆ ಮಾಡಲಾಗಿದೆ. ಕೆಲ ತಿಂಗಳ ಹಿಂದಷ್ಟೇ ಇವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಚಿತ್ರರಂಗದಲ್ಲಿ ಹೆಸರು ಮಾಡಬೇಕೆಂದು ಕನಸು ಕಂಡಿದ್ದ ಸತೀಶ್, ಹತ್ಯೆಯಾಗಿದ್ದು ಮಾತ್ರ ದುರಂತ.
ಸೋಷಿಯಲ್ ಮೀಡಿಯಾದಲ್ಲಿ ಕಿರುಚಿತ್ರಗಳ ಮೂಲಕ ಫೇಮಸ್ ಆಗಿದ್ದ ಸತೀಶ್ ವಜ್ರ, ಇತ್ತೀಚೆಗೆ 'ಲಗೋರಿ' ಎಂಬ ಕಿರುಚಿತ್ರದ ಮೂಲಕ ಜನರ ಗಮನ ಸೆಳೆದಿದ್ದರು. ಇದಕ್ಕೂ ಮುನ್ನ 'ಕ್ರಶ್' ಕಿರುಚಿತ್ರಕ್ಕೂ ಬಣ್ಣಹಚ್ಚಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಸತೀಶ್ ಅವರು ಯುವತಿಯೊಬ್ಬಳನ್ನು ಪ್ರೀತಿಸಿ ಮದ್ವೆ ಆಗಿದ್ದರು. ಕೆಲ ತಿಂಗಳ ಹಿಂದೆ ಸತೀಶ್ರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸತೀಶ್ ಬರ್ಬರವಾಗಿ ಕೊಲೆಯಾಗಿದ್ದು, ಇವರ ಪತ್ನಿಯ ಸಹೋದರನ ಮೇಲೆ ಅನುಮಾನ ಮೂಡಿದೆ. ಆರ್.ಆರ್ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.