ಎರಡು ವರ್ಷದ ಬಳಿಕ ಆದಿಚುಂಚನಗಿರಿ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆದ ಗಂಗಾಧರೇಶ್ವರಸ್ವಾಮಿ ರಥೋತ್ಸವ

adichunchanagiri-math-gangadhareshwara swamy rathotsava
Published on

ಮಂಡ್ಯ: ಪ್ರಸಿದ್ಧ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾಗಿರುವ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು (ಶುಕ್ರವಾರ) ಮುಂಜಾನೆ 4.58ರ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರು ಮಹಾರಥೋತ್ಸವ ಕಣ್ತುಂಬಿಕೊಂಡು ಜಯಘೋಷ ಮೊಳಗಿಸಿದರು.

ಗಂಗಾಧರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನ ರಥದಲ್ಲಿ ಕೂರಿಸುತ್ತಿದ್ದಂತೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪೂಜೆ ಸಲ್ಲಿಸಿದರು. ರಥ ಮುಂದೆ ಸಾಗುತ್ತಿದ್ದಂತೆ ಭಕ್ತರು ಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸಿ ಕಾಲಭೈರವೇಶ್ವರ ಸ್ವಾಮಿಗೆ ಜೈ, ಗಂಗಾಧರೇಶ್ವರ ಸ್ವಾಮಿಗೆ ಜೈ ಎಂದು ಜೈಕಾರ ಕೂಗಿದರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಅಡ್ಡಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿದರು.

ಕರೊನಾ ಹಿನ್ನೆಲೆ ಕಳೆದ 2 ವರ್ಷದ ಸರಳವಾಗಿಯೇ ರಥೋತ್ಸವ ನಡೆದಿತ್ತು. ಈ ಬಾರಿ ಅದ್ದೂರಿಯಾಗಿ ನಡೆಯಿತು. ವಿದ್ಯುತ್ ದೀಪಾಲಂಕಾರದಿಂದ ಆದಿಚುಂಚನಗಿರಿ ಕ್ಷೇತ್ರ ಕಂಗೊಳಿಸುತ್ತಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net