

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ "ಆಳ್ವಾಸ್ ನುಡಿಸಿರಿ' 2022ರ ಡಿಸೆಂಬರ್ನಲ್ಲಿ ಮೂರು ದಿನಗಳ ಕಾಲ ನಡೆಯಲಿದೆ.
ಡಿ.16ರಿಂದ 18ರವರೆಗೆ ನಡೆಯಲಿರುವ ಈ ಸಮ್ಮೇಳನವು ಸಂಭ್ರಮದ ವಾತಾವರಣ ಕಲ್ಪಿಸಿ ಕನ್ನಡದ ಬೆಳವಣಿಗೆಗೆ ಮಹತ್ವದ ಕಾಣಿಕೆ ನೀಡಬೇಕೆಂಬುದು, ಕನ್ನಡಿಗರನ್ನು ಒಗ್ಗೂಡಿಸಬೇಕೆಂಬುದು ನಮ್ಮ ಆಸೆ. ಈ ನಿಟ್ಟಿನಲ್ಲಿ ನಾವು ಈಗಾಗಲೇ ಕಾರ್ಯಪ್ರವೃತರಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಆಳ್ವಾಸ್ ನುಡಿಸಿರಿ-2022 ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಸಮ್ಮೇಳನದ ರೂವಾರಿ ಡಾ.ಎಂ.ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.