

ನೆಲಮಂಗಲ: ಕರೊನಾ ಸೋಂಕಿತನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ಗೆ ಬೆಂಕಿ ಹೊತ್ತಿಕೊಂಡು ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತುಮಕೂರು-ನೆಲಮಂಗಲ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ.
ನೆಲಮಂಗಲ ತಾಲೂಕು ಎಡೆಹಳ್ಳಿ ಬಳಿ ಅಪರಿಚಿತ ವಾಹನ ಆಂಬುಲೆನ್ಸ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಆಂಬುಲೆನ್ಸ್ ಹೊತ್ತಿ ಉರಿದಿದೆ. ಅಪರಿಚಿತ ವಾಹನದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನತ್ತ ಕೋವಿಡ್ ಸೋಂಕಿತನನ್ನು ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.