ಜೆಡಿಎಸ್ ಈಸ್ ಸಿಂಕಿಂಗ್, ಬಿಜೆಪಿ ಈಸ್ ಗ್ರೋಯಿಂಗ್: ಅರುಣ್ ಸಿಂಗ್

arun singh
Published on

ಮೈಸೂರು: ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ. ಜೆಡಿಎಸ್ ಈಸ್ ಸಿಂಕಿಂಗ್, ಬಿಜೆಪಿ ಈಸ್ ಗ್ರೋಯಿಂಗ್. ಜೆಡಿಎಸ್ ಜತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಅರುಣ್​ ಸಿಂಗ್​, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನು ಜನ ನೋಡಿದ್ದಾರೆ. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ.ಬಿ.ಎಸ್.ಯಡಿಯೂರಪ್ಪ ಒಬ್ಬ ದೊಡ್ಡ ನಾಯಕ. ಅವರಿಗೆ ಸಂಘಟನೆ ಬಗ್ಗೆ ಅನುಭವ ಇದೆ. ಅವರ ಅನುಭವವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ ಎಂದರು.

ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ‌ಪರಿಪೂರ್ಣ ಕೆಲಸ ಮಾಡುತ್ತಿದೆ. ಹಳೇ ಮೈಸೂರು ಭಾಗದಲ್ಲಿ ದಿನ‌ದಿನಕ್ಕೂ ಸಂಘಟನೆ‌ ಹೆಚ್ಚಾಗುತ್ತಿದೆ. ಈ ಭಾಗದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ‌. ಇಬ್ಬರು ಸಚಿವರು ಖಾತೆಯನ್ನು ಸ್ವೀಕಾರ ಮಾಡಿದ್ದಾರೆ. ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರ ಇರುವುದಿಲ್ಲ ಎಂದು ಅರುಣ್ ಸಿಂಗ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net