ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ನಿಧನ

babagowda patil
Published on

ಬೆಳಗಾವಿ: ಕೇಂದ್ರ ಮಾಜಿ ಸಚಿವ, ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಾಬಾಗೌಡ ಪಾಟೀಲ(88) ಅವರು ಇಂದು ಬೆಳಗ್ಗೆ ನಿಧನರಾದರು.

ಬಾಬುಗೌಡ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಒಂದು ವಾರದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು. ಬೆಳಗಾವಿ ಜಿಲ್ಲೆಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಬಾಬಾಗೌಡ ಪಾಟೀಲ ಅವರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. 1989ರ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದಿಂದ ಕಿತ್ತೂರು ಮತ್ತು ಧಾರವಾಡ ಮತ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದ ಅವರು ಎರಡೂ ಕಡೆಯೂ ಜಯಗಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net