ಧಾರಾಕಾರ ಮಳೆಗೆ ಬೆಂಗಳೂರಲ್ಲಿ ಕಟ್ಟಡ ಕುಸಿತ: ಮತ್ತೆರಡು ಕಟ್ಟಡ ತೆರವಿಗೆ ಕ್ರಮ

New Project (27)
Published on

ಬೆಂಗಳೂರು: ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಲಸೂರು ವಾರ್ಡ್ ವ್ಯಾಪ್ತಿಯ ಮಿಲ್ಕ್ ಮ್ಯಾನ್ ಸ್ಟ್ರೀಟ್​ನಲ್ಲಿ ಶುಕ್ರವಾರ ಬೆಳಗ್ಗೆ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಬಿಬಿಎಂಪಿ ಆಯುಕ್ತ ಗೌರವ್‌ ಗುಪ್ತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೆಲ ಮತ್ತು ಮೊದಲ ಮಹಡಿ ಒಳಗೊಂಡ 20 ಚದುರ ಅಡಿಯ ಈ ಕಟ್ಟಡ ಕುಸಿದಿದೆ. 58 ವರ್ಷದ ಹಳೆಯ ಕಟ್ಟಡ ಇದಾಗಿದ್ದು, ಮೊಲದೇ ಶಿಥಿಲಗೊಂಡಿತ್ತು. ಮುನ್ನೆಚ್ಚರಿಕೆಯಾಗಿಗೆ ಕಟ್ಟಡ ಮಾಲೀಕರಿಗೆ ಪಾಲಿಕೆ ಈಗಾಗಲೇ ನೋಟಿಸ್ ನೀಡಿತ್ತು. ಕಟ್ಟಡ ಕುಸಿದ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ. ಕಟ್ಟಡ ತ್ಯಾಜ್ಯ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ಸ್ಥಳದಲ್ಲಿ ಇನ್ನೆರಡು ಕಟ್ಟಡಗಳು ಶಿಥಿಲಗೊಂಡಿದ್ದು, ಅವುಗಳನ್ನೂ ನೆಲಸಮ ಮಾಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net