

ಬೆಂಗಳೂರು: ಸದ್ಯದ ಗೈಡ್ಲೈನ್ಸ್ ಪ್ರಕಾರ ಬೆಂಗಳೂರಲ್ಲಿ ದೇವಸ್ಥಾನಗಳಲ್ಲಿ ಮಾತ್ರವೇ ಗಣೇಶ ಕೂರಿಸಲು ಅವಕಾಶವಿದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.
ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಮಲ್ ಪಂತ್, ರಾಜ್ಯ ಸರ್ಕಾರದ ನಿಯಮಗಳನ್ವಯ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಕರೊನಾ ನಿಯಮ ಜಾರಿಯಲ್ಲಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತೆ ಎಂದು ಎಚ್ಚರಿಸಿದರು.
ಸದ್ಯದ ಮಾರ್ಗಸೂಚಿ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಗಣೇಶ ಮೂರ್ತಿಯನ್ನು ಕೂರಿಸುವಂತಿಲ್ಲ. ದೇವಸ್ಥಾನಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕಿದ್ದರೂ ಬಿಬಿಎಂಪಿ ಮತ್ತು ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರವೇ ನಾವು ಗಣೇಶ ಹಬ್ಬಕ್ಕೆ ಅನುವು ಮಾಡಿಕೊಡುತ್ತೇವೆ ಎಂದರು.