ಬ್ಯಾಂಕ್​ ಸಹಾಯಕ ವ್ಯವಸ್ಥಾಪಕನಿಂದ ಮಹಾ ಮೋಸ: ಪತ್ನಿ ಖಾತೆಗೆ ಬರೋಬ್ಬರಿ 2.69 ಕೋಟಿ ರೂ. ವರ್ಗಾವಣೆ

fraud
Published on

ಯಲ್ಲಾಪುರ: ಪಟ್ಟಣದ ಬ್ಯಾಂಕ್​ ಆಫ್​ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನು ಬ್ಯಾಂಕಿನ ಖಾತೆಯಿಂದ ತನ್ನ ಪತ್ನಿಯ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿ ಮೋಸವೆಸಗಿರುವ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್​ ಆಫ್​ ಬರೋಡಾ ಸ್ಥಳೀಯ ಶಾಖೆಯ ಸಹಾಯಕ ವ್ಯವಸ್ಥಾಪಕ, ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ 2022ರ ಏಪ್ರಿಲ್​ 7ರಿಂದ ಸೆ.9ರವರೆಗಿನ ಅವಧಿಯಲ್ಲಿ ಮೋಸದಿಂದ ಹಣ ವರ್ಗಾವಣೆ ಮಾಡಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಲಾಗಿನ್​ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಾಲಾದ ಎಸ್​ಬಿಐ ಶಾಖೆಯಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕ ಗೊರ್ರೆ ಅವರ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿದ್ದಾರೆ. ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net