ಸಚಿವ ಈಶ್ವರಪ್ಪ ಅವರ ಹೆಸರು ಬರೆದು ಆತ್ಮಹತ್ಯೆ ಮಾಡ್ಕೊಂಡ ಸಂತೋಷ್​: ಈ ಪ್ರಕರಣ ಕುರಿತು ಸಿಎಂ ಹೇಳಿದ್ದೇನು?

bommai
Published on

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಪೂರ್ಣ ತನಿಖೆಯಾಗಲಿದೆ. ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮ ಕೈಗೊಳ್ಳುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಸಿಎಂ, ಪ್ರಮಾಣಿಕ ಹಾಗೂ ಪಾರದರ್ಶಕ ತನಿಖೆ ನಡೆಯಲಿದೆ. ಈಶ್ವರಪ್ಪ ವಿರುದ್ಧ ಸಂತೋಷ್ ಅವರು ಕಮಿಷನ್​ ಆರೋಪ ಮಾಡಿದ್ದರು. ಇದನ್ನು ಅಲ್ಲಗೆಳೆದ ಈಶ್ವರಪ್ಪ, ಮಾನಹಾನಿ ಕೇಸ್ ಹಾಕಿದ್ದರು. ಇದೀಗ ಸಂತೋಷ್​ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಫೋರೆನ್ಸಿಕ್‌ ತಂಡವೂ ಮಂಗಳೂರಿನಿಂದ ತೆರಳಿದೆ. ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net