

ಬೆಳಗಾವಿ: ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಚೂನಮ್ಮ ದೇವಿ ಜಾತ್ರೆ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದೆ.
ಗುರುವಾರ ರಾತ್ರಿ ವೇದಿಕೆ ಕಾರ್ಯಕ್ರಮ ನಡೆಯುವಾಗಲೇ ಸೌಂಡ್ ಸಿಸ್ಟಮ್ ಮತ್ತು ಹೈಮಾಸ್ಕ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ವೇದಿಕೆಯ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವಘಡದ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.