ಬೆಳಗಾವಿಯ ಮತ್ತೊಬ್ಬ ಗುತ್ತಿಗೆದಾರ ಲಾಡ್ಜ್​ನಲ್ಲಿ ಆತ್ಮಹತ್ಯೆ

hang
hang
Published on

ಬಾಳೆಹೊನ್ನೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಉಡುಪಿ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯ ಮತ್ತೊಬ್ಬ ಗುತ್ತಿಗೆದಾರ ಬಾಳೆಹೊನ್ನೂರು ಪಟ್ಟಣದ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ಮೂಲದ ಬಸವರಾಜ್​(47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಮೂರು ದಿನಗಳ ಹಿಂದೆ ಕೊಠಡಿ ಪಡೆದಿದ್ದ ಬಸವರಾಜ್​ ಬುಧವಾರ ಬೆಳಗ್ಗೆ ಕೊಠಡಿಯಿಂದ ಹೊರಬಂದಿದ್ದರು. ಬಳಿಕ ಕೊಠಡಿ ಒಳಗೆ ತೆರಳಿದವರು ಹೊರಗೆ ಬಂದಿರಲಿಲ್ಲ. ಬುಧವಾರ ಮಧ್ಯಾಹ್ನದವರೆಗೂ ಕೊಠಡಿ ಬಾಗಿಲು ತೆರೆಯದಿದ್ದರಿಂದ ಅನುಮಾನಗೊಂಡ ಲಾಡ್ಜ್​ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲಿಸಿದಾಗ ಕೊಠಡಿಯ ಫ್ಯಾನ್​ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಬಸವರಾಜ್​ ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಳಗಾವಿಯಿಂದ ಕುಟುಂಬಸ್ಥರು ಬಂದ ಬಳಿಕ ಆತ್ಮಹತ್ಯೆಯ ಕಾರಣ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.‘

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net