ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಪಾಲಿಕೆಗಳ ಚುನಾವಣೆ: ಮತದಾನ ಆರಂಭ

palike election
Published on

ಬೆಂಗಳೂರು: ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ ನಡೆಯುತ್ತಿದ್ದು, ಇಂದು(ಶುಕ್ರವಾರ) ಬೆಳಗ್ಗೆ 7ಕ್ಕೆ ಮತದಾನ ಆರಂಭವಾಗಿದೆ.

ಕಲಬುರಗಿ ಪಾಲಿಕೆಯ 55 ವಾರ್ಡ್​ಗಳಿಂದ 300 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 533 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣವಿದ್ದರೂ, ಮತದಾನ ಚುರುಕುಗೊಂಡಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ 82 ವಾರ್ಡ್​ಗಳಿಗೆ 420 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 9 ಗಂಟೆ ವೇಳೆಗೆ ಶೇ.4.2% ಮತದಾನ ಆಗಿದೆ. 27ನೇ ವಾರ್ಡ್​ನಲ್ಲಿ ಗಾಮನಗಟ್ಟಿಯಲ್ಲಿನ ಮತಗಟ್ಟೆ ಸಂಖ್ಯೆ 6, 7, 8, 9, 10ರಲ್ಲಿ ವಿವಿ ಪ್ಯಾಟ್ ಇಲ್ಲದೆ ಮತದಾನ ಸ್ಥಗಿತಗೊಂಡಿತ್ತು. ಅತ್ತ 52ನೇ ವಾರ್ಡ್​ನಲ್ಲಿ ಬಿಜೆಪಿಯವರಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆಂದು ಆರೋಪಿಸಿ ಕೆ.ಆರ್.ಎಸ್ ಪಕ್ಷದವರು ಪ್ರತಿಭಟನೆಗೆ ಮುಂದಾಗಿದ್ದ ಘಟನೆ ನಡೆಯಿತು.

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್​ಗಳ ಚುನಾವಣೆಯಲ್ಲಿ 385 ಅಭ್ಯರ್ಥಿಗಳು ಅಖಾಡಕ್ಕಿಳಿದಿದ್ದಾರೆ. ಬೆಳಗಾವಿಯಲ್ಲಿ 415 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆ ವೇಳೆಗೆ ಶೇ.5.38 ಮತದಾನವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net