ಪತ್ನಿಯ ಸೀಮಂತಕ್ಕೆ ತೆರಳುತ್ತಿದ್ದ ಬೆಳಗಾವಿ ಯೋಧ ಮಾರ್ಗಮಧ್ಯೆ ಅಪಘಾತದಲ್ಲಿ ಸಾವು

New Project(27)
Published on

ಬೆಳಗಾವಿ: ಪತ್ನಿಯ ಸೀಮಂತಕ್ಕೆಂದು ರಜೆ ಮೇಲೆ ಊರಿಗೆ ತೆರಳುತ್ತಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.

ಸವದತ್ತಿ ತಾಲೂಕಿನ ಹೊಸೂರು ಗ್ರಾಮದ ಯೋಧ ಪ್ರಕಾಶ ಸಂಗೊಳ್ಳಿ (29) ಮೃತರು. ಬೆಳಗಾವಿಯ ಎಂಎಲ್‌ಐಆರ್​ಸಿಯಲ್ಲಿ ಪ್ರಕಾಶ ಅವರು ಕೆಲಸ ಮಾಡುತ್ತಿದ್ದರು. ಜೂ.5ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಿಗದಿಯಾಗಿತ್ತು. ಹಾಗಾಗಿ ರಜೆ ಹಾಕಿ ಗುರುವಾರ ರಾತ್ರಿ ಊರಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ, ಗಂಭೀರ ಗಾಯಗೊಂಡ ಯೋಧ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಶುಕ್ರವಾರ ಬೆಳಗ್ಗೆ ಹೊಸೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಇಡೀ ಗ್ರಾಮ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net