

ಮಂಡ್ಯ: ಮದ್ದೂರು ತಾಲೂಕಿನ ಮಲ್ಲಾಕನಹಳ್ಳಿ ಗೇಟ್ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿದ್ದಾರೆ.
ಟಿಪ್ಪರ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ಮೂವರ ಶವಗಳು ಚೆಲ್ಲಾಪಿಲ್ಲಿಯಾಗಿದ್ದ ಬಿದ್ದಿದ್ದ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದರು. ಮೃತರ ವಿಳಾಸ ಪತ್ತೆಯಾಗಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಮದ್ದೂರು ತಾಲೂಕು ಆಸ್ಪತ್ರೆಗೆ ಶವಗಳನ್ನು ರವಾನಿಸಿದರು. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.