

ತುಮಕೂರು: ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಿ ಎಂದು ಆಗ್ರಹಿಸಿ ಕೆ.ಟಿ. ಶಾಂತಕುಮಾರ್ ನೇತೃತ್ವದಲ್ಲಿ ಶನಿವಾರ ಬೈಕ್ ರ‍್ಯಾಲಿ ನಡೆಯಿತು.
ತುಮಕೂರು ಜಿಲ್ಲೆಯ ತಾಲೂಕುಗಳಲ್ಲಿ ತಿಪಟೂರು ಒಂದು. ಚಿಕ್ಕನಾಯಕನಹಳ್ಳಿ, ಹುಳಿಯಾರು, ತುರುವೇಕೆರೆ ಸೇರಿದಂತೆ ತಿಪಟೂರನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಆಗ್ರಹ ದಟ್ಟವಾಗಿದೆ. ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ. ತಿಪಟೂರಿನ ಕೋಡಿಸರ್ಕಲ್ನಿಂದ ಹಾಸನ ಸರ್ಕಲ್ವರೆಗೆ ಬೈಕ್ ರ‍್ಯಾಲಿ ಹೊರಟಿತು.