

ಬೆಂಗಳೂರು: ನಗರದ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಖಳನಟ, ನಿರ್ದೇಶಕ ಸೂರ್ಯೋದಯ ಅವರ ಪುತ್ರ ಮಯೂರ್(20) ಮೃತಪಟ್ಟಿದ್ದಾನೆ.
ಬೈಕ್ನಲ್ಲಿ ಮಯೂರ್ ಹೋಗುತ್ತಿದ್ದ. ಈ ವೇಳೆ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತವಾಗಿ ಮಯೂರ್ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೂರ್ಯೋದಯ ಅವರು ಕನ್ನಡ ಚಿತ್ರ 'ಸ್ಟಾಲ್' ಹಾಗೂ 'ದೇಯಿ ಬೈದತಿ' ಎಂಬ ತುಳು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.