

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬೈಕ್ ಅನ್ನು ಮೂವರು ಕಳ್ಳರು ರಾತ್ರೋರಾತ್ರಿ ಎತ್ತಿಕೊಂಡು ಹೋಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೈಸೂರಿನ ಸಿದ್ಧಾರ್ಥನಗರದ ಕೆ.ಎಂ. ಪವನ್ಕುಮಾರ್ ಬೈಕ್ ಕಳೆದುಕೊಂಡ ಯುವಕ. ಸಿವಿಲ್ ಇಂಟರ್ನ್ಶಿಪ್ ಸಲುವಾಗಿ ಲಲಿತಾದ್ರಿಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ. ಸೆ.22ರ ರಾತ್ರಿ ಊಟ ಮುಗಿಸಿಕೊಂಡು ರೂಮ್ ಬಳಿ ಹೋದಾಗ ಮನೆ ಮುಂದೆ ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬೈಕ್ ನಾಪತ್ತೆಯಾಗಿತ್ತು. ಸುತ್ತಮುತ್ತ ಹುಡುಕಾಟ ನಡೆಸಿದಾಗ ಎಲ್ಲಿಯೂ ಕಂಡಿಲ್ಲ.
ಕೊನೆಗೆ ಪಕ್ಕದ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಬೈಕ್ ಅನ್ನು ಮೂವರು ದುಷ್ಕರ್ಮಿಗಳು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಆರೋಪಿಗಳನ್ನು ಪತ್ತೆ ಮಾಡಿಕೊಡುವಂತೆ ಪೊಲೀಸ್ ಠಾಣೆಗೆ ಪವನ್ಕುಮಾರ್ ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಮೈಸೂರಿನ ನಝರ್ಬಾದ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.