

ಬೇಲೂರು: ಇಬ್ಬೀಡು ಗ್ರಾಮದ ಸಮೀಪ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ.
ತಾಲೂಕಿನ ಚಿಲ್ಕೂರು ಹೊಸಹಳ್ಳಿ ಗ್ರಾಮದ ದಿನೇಶ್(45) ಮೃತಪಟ್ಟ ದುರ್ದೈವಿ.
ಚಿಲ್ಕೂರು ಹೊಸಹಳ್ಳಿ ಗ್ರಾಮಕ್ಕೆ ಬೈಕ್‌ನಲ್ಲಿ ಬೇಲೂರು ಕಡೆಯಿಂದ ದಿನೇಶ್ ತೆರಳುತ್ತಿದ್ದು, ಹಾಸನ ಕಡೆಯಿಂದ ಬರುತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರನಿಗೆ ಹೆಚ್ಚಿನ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹಗರೆ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ ಹಾಗೂ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಅಪಘಾತ ಸ್ಥಳಕ್ಕೆ ಪಿಎಸ್‌ಐ ಅಜಯ್‌ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.