ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

15 ckm 6 pradeep
ನಗರಸಭೆಯ ೨ನೇ ವಾರ್ಡ್ನ ಬಿಲ್ ಕಲೆಕ್ಟರ್ ಪ್ರದೀಪ್
Published on

ಚಿಕ್ಕಮಗಳೂರು: ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆಯ ೨ನೇ ವಾರ್ಡ್ನ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಸದಾಶಿವಮೂರ್ತಿ ಎಂಬುವವರ ಬೈಪಾಸ್ ರಸ್ತೆಯ ಜಾಗದ ಇ-ಸ್ವತ್ತು ಮಾಡಿಕೊಡಲು ಚಿಕ್ಕಮಗಳೂರು ನಗರಸಭೆ ವಾರ್ಡ್ ೨ರ ಬಿಲ್ ಕಲೆಕ್ಟರ್ ಪ್ರದೀಪ್ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಸದಾಶಿವಮೂರ್ತಿ ಮಗ ರಾಕೇಶ್ ನೀಡಿದ ದೂರಿನ ಮೇರೆಗೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ಹಾಗೂ ಮಲ್ಲಿಕಾರ್ಜುನ ನೇತೃತ್ವದ ತಂಡ ಪ್ರದೀಪ್‌ನನ್ನು ನಗರಸಭೆ ಕಚೇರಿ ಎದುರು ಬಂಧಿಸಿದ್ದಾರೆ. ಫೋನ್ ಪೇ ಮೂಲಕ ರಾಕೇಶ್ ಮೊಬೈಲ್‌ನಿಂದ ಮೊದಲಿಗೆ ಮೂರು ಸಾವಿರ ರೂಪಾಯಿ ಹಾಕಿಸಿಕೊಂಡಿದ್ದ ಪ್ರದೀಪ್, ನಂತರ ನಗದು ೨೦೦೦ ಹಾಗೂ ಇದೀಗ ಮತ್ತೆ ೨೦೦೦ಕ್ಕೆ ಬೇಡಿಕೆ ಇಟ್ಟಿದ್ದು ಅದನ್ನು ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಕಾರ್ಯಾಚರಣೆ ತಂಡದಲ್ಲಿ ಲೋಕಾಯುಕ್ತ ಪೊಲೀಸರಾದ ಅನಿಲ್ ನಾಯಕ್, ಲೋಕೇಶ್, ವಿಜಯಭಾಸ್ಕರ್, ಶ್ರೀಧರ್ ಪ್ರಸಾದ್ ಚಂದನ್ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net