

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಕನಕಪುರ ರಸ್ತೆ ಸೌತ್ಎಂಡ್ ಸರ್ಕಲ್ನಲ್ಲಿ ಮಂಗಳವಾರ ಮಧ್ಯಾಹ್ನ 1.15ರ ಸುಮಾರಿಗೆ ಬಿಎಂಟಿಸಿ ಬಸ್ ಬೆಂಕಿಗೆ ಆಹುತಿಯಾಗಿದೆ. ಮೊದಲು ಇಂಜನ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಡ್ರೈವರ್ ಮತ್ತು ಕಂಡಕ್ಟರ್ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದೆ.
ಬಸ್ನಲ್ಲಿ ಸುಮಾರು ಇಪ್ಪತ್ತು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆ ಆಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಜ.21ರಂದು ಕೆ.ಆರ್.ಮಾರುಕಟ್ಟೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ವೊಂದು ಚಾಮರಾಜಪೇಟೆಯ ಮಕ್ಕಳಕೂಡ ಬಳಿ ನಡುರಸ್ತೆಯಲ್ಲೇ ಹೊತ್ತಿ ಉರಿದಿತ್ತು.