ಮೈಸೂರು ವಾಣಿಜ್ಯ ತೆರಿಗೆ ಕಚೇರಿಗೆ ಬಾಂಬ್ ಬೆದರಿಕೆ! ಮೀಟಿಂಗ್​​ ಬಿಟ್ಟು ಹೊರ ಓಡಿದ ಸಿಬ್ಬಂದಿ

mysore incom tax
Published on

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಪತ್ರ ಬಂದ ಹಿನ್ನೆಲೆಯಲ್ಲಿ ಕಚೇರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿ ಬಂದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಈ ಬಾಂಬ್ ವಿಷಯ ತಿಳಿಯುತ್ತಿದ್ದಂತೆ ಸಿಬ್ಬಂದಿ ಹೊರ ಓಡಿದರು.

ಬೆಳಗ್ಗೆ 11.30ರ ಸುಮಾರಿನಲ್ಲಿ ಮೀಟಿಂಗ್​ ನಡೆಯುತ್ತಿತ್ತು. ಕಚೇರಿಯಲ್ಲಿ ಸುಮಾರು‌ 80 ಸಿಬ್ಬಂದಿ ಇದ್ದರು. ಮಧ್ಯಾಹ್ನ 12 ರಿಂದ 1 ಗಂಟೆಯೊಳಗೆ ಕಚೇರಿಯಲ್ಲಿ ಸ್ಫೋಟವಾಗುವ ಬಗ್ಗೆ ಬೆದರಿಕೆ ಸಂದೇಶ ಪೊಲೀಸರಿಗೆ ಹೋಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮೀಟಿಂಗ್​ ಬಿಟ್ಟ ಹೊರ ಬಂದೆವು ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಮಂಜುನಾಥ್ ಹೇಳಿದರು.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ವಾಣಿಜ್ಯ ತೆರಿಗೆ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net