

ಗುಬ್ಬಿ: ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಧೀರ ಮಹಿಳೆ ಚನ್ನಮ್ಮ. ದೇಶದ ಜನ ತಾವಿರುವ ಪ್ರದೇಶದಲ್ಲಿ ಗೌರವದಿಂದ ಬದುಕಬೇಕಾದರೆ ಸ್ವಾತಂತ್ರ$್ಯ ಬಹಳ ಮುಖ್ಯ ಎಂದು ಪಪಂ ಮುಖ್ಯಾಧಿಕಾರಿ ಮಂಜುಳಾ ದೇವಿ ತಿಳಿಸಿದರು.
ಪಟ್ಟಣದ ಬಾಲಕಿಯರ ಪಿಯು ಕಾಲೇಜುನಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ವೀರ ರಾಣಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ಮಾತನಾಡಿದರು.
ವೀರ ರಾಣಿ ಒನಕೆ ಓಬವ್ವ, ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂಥ ಮಹಾನ್ ವ್ಯಕ್ತಿಗಳ ಹೋರಾಟ ಫಲವಾಗಿ ಸ್ವಾತಂತ್ರ್ಯ ದೊರಕಿದೆ. ಆದ್ದರಿಂದ ನಾವೆಲ್ಲರೂ ಸ್ವತಂತ್ರವಾಗಿ ಬದುಕಲು ಸಾಧ್ಯವಾಗಿದೆ. ಈ ಹಿಂದೆ ಹಾಕಿ ಕೊಟ್ಟ ಪುರಾವೆಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗುವಂತೆ ತಿಳಿಸಿದರು.
ಉಪನ್ಯಾಸಕ ಲೋಕೇಶ್ ಮಾತನಾಡಿ, ಕಿತ್ತೂರಿನ ರಾಣಿ ಚನ್ನಮ್ಮ ಅವರ ಜೀವನ ಮತ್ತು ಹೋರಾಟ ನಾಡಿನ ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿದಾಯಕವಾಗಿದೆ. ಮಹಿಳೆಯರು ಕೂಡ ಸ್ವಾವಲಂಭಿಗಳಾಗಿ ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಹೋರಾಟ ಮಾಡುವಂತಹ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಪಪಂ ಸದಸ್ಯ ಮಹಮ್ಮದ್ ಸಾದಿಕ್, ಹೆಚ್ಚುವರಿ ಶಿರಸ್ತೇದಾರ್ ವರುಣ್, ಬಾಲಕಿಯರ ಹೈಸ್ಕೂಲ್ ಮುಖ್ಯಶಿಕ್ಷಕಿ ದೇವಿಕಾ, ಕಸಾಪ ಅಧ್ಯಕ್ಷ ಯತೀಶ್, ಪ್ರಾಂಶುಪಾಲ ಮಂಜುನಾಥ್, ಹಾಗೂ ಉಪನ್ಯಾಸಕರು ಶಿಕ್ಷಕರು ಇದ್ದರು.