

ಮುದ್ದೇಬಿಹಾಳ: ಇತ್ತೀಚಿಗೆ ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ಎಫ್ ಯೋಧ ಬಸವರಾಜ ಡೊಂಗರಗಾವಿ(28) ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದರು.
ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ ಡೊಂಗರಗಾವಿ ಅವರು 8 ವರ್ಷದ ಹಿಂದೆ ಸೇವೆಗೆ ಸೇರಿದ್ದರು. ಪ್ರಸ್ತುತ ಬಿಹಾರ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರಯ. ಇತ್ತೀಚಿಗಷ್ಟೇ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಪಘಾತಕ್ಕೀಡಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.