ದೇವನಹಳ್ಳಿಯಲ್ಲಿ ರಕ್ತದಾನ ಮಾಡಿದ ಬಿಎಸ್ಎಫ್ ಯೋಧರು

blood donat
Published on

ದೇವನಹಳ್ಳಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನಿಗಳ ಶಿಬಿರದಲ್ಲಿ ಪಾಲ್ಗೊಂಡ ಬಿಎಸ್ಎಫ್ ಯೋಧರು ರಕ್ತದಾನ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಲಯನ್ಸ್ ರಕ್ತನಿಧಿ ಕೇಂದ್ರ ಹಾಗೂ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಭಾನುವಾರ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳ ಶಿಬಿರ-2022 ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಶಿಬಿರದಲ್ಲಿ ಸ್ವಯಂ ಪ್ರೇರಿತವಾಗಿ ಪಾಲ್ಗೊಂಡ ಬಿಎಸ್ಎಫ್ ಯೋಧರು ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ವೈದ್ಯರುಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ‌ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net