ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

belagavi rain
Published on

ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಮಳೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 7 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಧಾರಾಕಾರ ಮಳೆಗೆ ಮನೆ ಕುಸಿದು 7 ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿರುವ ಸಿಎಂ ಬೊಮ್ಮಾಯಿ, ಮನೆ ಕುಸಿತದಿಂದ ಸಂಭವಿಸಿರುವ ಈ ಅನಾಹುತ ದುರದೃಷ್ಟಕರ. ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವುದು ನನಗೆ ಬಹಳ ದುಃಖ ತಂದಿದೆ. ಮೊದಲಿಗೆ ನಾನು ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಪರಿಹಾರ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಬೆಳಗಾವಿ ಡಿಸಿ ಎಂ.ಜಿ. ಹಿರೇಮಠ ಅವರೊಂದಿಗೂ ಮಾತನಾಡಿದ್ದಾರೆ. ತಕ್ಷಣ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net