ಪಾವಗಡದಲ್ಲಿ ಖಾಸಗಿ ಬಸ್​ ಪಲ್ಟಿ: 4 ಮಂದಿ ಸ್ಥಳದಲ್ಲೇ ಸಾವು, 25ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

accident pavagada
Published on

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದ್ದು, 4 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರೆಲ್ಲರೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಎನ್ನಲಾಗಿದೆ.

ಶನಿವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, 25ಕ್ಕೂ ಹೆಚ್ಚು ಜನ ಮಂದಿ ಗಂಭೀರ ಗಾಯಗೊಂಡಿದ್ದಾರೆ. ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಮೃತದೇಹಗಳು ರಸ್ತೆ, ರಸ್ತೆ ಬದಿ... ಹೀಗೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು. ಗಂಭೀರಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಬಸ್​ ಬಳಿಕ ಪಲ್ಟಿಯಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net