ಜಮೀನಿಗೆ ನುಗ್ಗಿತು ಬಸ್​: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

Busfall
Published on

ವಿಜಯಪುರ: ಚಲಿಸುತ್ತಿದ್ದ ಬಸ್​ ಚಾಲಕನ ನಿಯಂತ್ರಣ ಕಳೆದುಕೊಂಡು ಏಕಾಏಕಿ ಜಮೀನಿಗೆ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ವೇಳೆ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹಿಂಬದಿ ಚಕ್ರದ ಪಾಟಾ ಕಟ್​ ಆಗಿದ್ದರಿಂದ ಬಸ್ ಚಾಲಕ ರಾಯಗೊಂಡ ಬಿರಾದಾರ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬಸ್ ನಿರ್ವಾಹಕ ದಸ್ತಗಿರಿಸಾಬ್ ವಾಲೀಕಾರ್‌ಗೆ ಗಂಭೀರ ಗಾಯಗೊಂಡಿದ್ದಾರೆ. ಚಾಲಕನ ಕಾರ್ಯಕ್ಕೆ ಪ್ರಯಾಣಿಕರು, ಸ್ಥಳೀಯರು ಧನ್ಯವಾದ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net