ಈಶ್ವರಪ್ಪ ನಿರಪರಾಧಿ ಎಂದು ಸಾಬೀತಾಗುತ್ತೆ, ಮತ್ತೆ ಸಚಿವರಾಗ್ತಾರೆ: ಬಿಎಸ್​ವೈ

bsy eshwarappa
Published on

ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ ಯಾವುದೇ ತಪ್ಪು ಮಾಡದಿದ್ದರೂ ಅವರು ಮಂತ್ರಿಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ಬೇಸರದ ಸಂಗತಿ. ಕೆಲವೇ ತಿಂಗಳಲ್ಲಿ ತನಿಖೆ ಪೂರ್ಣಗೊಂಡು ಅವರು ನಿರಪರಾಧಿ ಎಂಬುದು ಸಾಬೀತಾಗಿ ಮತ್ತೆ ಸಚಿವರಾಗುತ್ತಾರೆಂಬ ವಿಶ್ವಾಸವಿದೆ. ಆ ದಿನ ಬೇಗ ಬರಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಇನ್ನು ಎರಡ್ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿದರೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಏನೂ ಇಲ್ಲ ಎಂಬುದು ದೃಢವಾಗುತ್ತದೆ. ಆಗ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಯಾವುದೇ ಅಭ್ಯಂತರವಿರುವುದಿಲ್ಲ. ಈಗಿನ ಪರಿಸ್ಥಿತಿಯನ್ನು ಈಶ್ವರಪ್ಪ ಸಮರ್ಥವಾಗಿ ಎದುರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಲು ಬಿಎಸ್​ವೈ ನಿರಾಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net