ಮೈಸೂರಲ್ಲಿ ಕಾರು ಅಪಘಾತ: ಇಎಸ್‌ಐ ಆಸ್ಪತ್ರೆ ವೈದ್ಯ ಸಾವು

accident esi hspital doctor
Published on

ಮೈಸೂರು: ರಸ್ತೆ ಡಿವೈಡರ್​ನ ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ಇಎಸ್‌ಐ ಆಸ್ಪತ್ರೆ ವೈದ್ಯ ಡಾ.ಶಿವಕುಮಾರ್(35) ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.

ಡಾ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರು ಮಾನಸಿ ನಗರದ ರಿಂಗ್ ರಸ್ತೆ ಬಳಿ ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ತೀವ್ರ ಗಾಯಗೊಂಡಿದ್ದ ಡಾ.ಶಿವಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದರು. ಸ್ಥಳಕ್ಕೆ ಬಂದ ಸಿದ್ಧಾರ್ಥ ನಗರ ಸಂಚಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net