

ತುಮಕೂರು: ಕರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲೆಂದು ಕಾರಿನಲ್ಲಿ ಶನಿವಾರ ಹೊರಟಿದ್ದ ಮೂವರು ಯುವಕರ ಪೈಕಿ ಇಬ್ಬರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೀಡಾಗಿ ದುರಂತ ಅಂತ್ಯಕಂಡ ಘಟನೆ ನೆಲಮಂಗಲ ಸಮೀಪದ ಟಿ.ಬೇಗೂರು ಬಳಿ ನಡೆದಿದೆ.
ಉದಯ್(23) ಮತ್ತು ಪವನ್(24) ಮೃತರು, ಮಣಿ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ತುಮಕೂರಿನ ಚಿಕ್ಕಪೇಟೆಯವರು.
ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬೆಂಗಳೂರಿಗೆ ತೆರಳುವಾಗ ತಾಳೆಕೆರೆ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಉದಯ್ ಮತ್ತು ಪವನ್ ಮೃತಪಟ್ಟಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.