ಶೋರೂಂನಿಂದ ರಸ್ತೆಗಿಳಿದ ಹೊಸ ಫಾರ್ಚೂನರ್ ಕಾರು ಬಸ್ಸಿಗೆ ಡಿಕ್ಕಿ

web - udp car
ಬಸ್ಸಿಗೆ ಡಿಕ್ಕಿಯಾದ ಪರಿಣಾಮ ಫಾರ್ಚೂನರ್ ಕಾರು ನಜ್ಜುಗುಜ್ಜಾಗಿರುವುದು.
Published on

ಉಡುಪಿ: ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಶೋರೂಂನಿಂದ ಆಗಷ್ಟೇ ರಸ್ತೆಗಿಳಿದ ಫಾರ್ಚೂನರ್ ಕಾರು ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.

ನಿಟ್ಟೂರು ಬಸ್ ನಿಲ್ದಾಣದ ಬಳಿ ಅವಘಡ

ಕುಂದಾಪುರ ಶೋರೂಂನಿಂದ ಮಂಗಳೂರಿಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದು, ನಿಟ್ಟೂರು ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಿಟಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಬಸ್‌ನ ಹಿಂಬದಿಗೂ ಹಾನಿಯಾಗಿದೆ.

ಸ್ಥಳಕ್ಕೆ ಧಾವಿಸಿದ ಶೋರೂಂ ಸಿಬ್ಬಂದಿ

ಅಪಘಾತದಿಂದ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಾಹಿತಿ ತಿಳಿದ ಕೂಡಲೇ ಶೋರೂಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net