ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

10.npk-3
Published on


ಮಡಿಕೇರಿ : ನಾಪೋಕ್ಲು ಪಾರಾಣೆ ಗ್ರಾಮ ಪಂಚಾಯಿತಿಯ ಕೈಕಾಡು ರಸ್ತೆಯಲ್ಲಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ವಿರಾಜಪೇಟೆ ಕಡೆಯಿಂದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ನಾಪೋಕ್ಲು ಕಡೆಗೆ ಬರುತ್ತಿತ್ತು. ಈ ವೇಳೆ ಪಾರಾಣೆ-ನಾಪೋಕ್ಲು ಮುಖ್ಯರಸ್ತೆಯ ಕೈಕಾಡು ಸೇತುವೆ ಬಳಿಯ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಅಪ್ಪಳಿಸಿದೆ. ಪರಿಣಾಮ ಕಾರಿನ ಒಂದು ಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದ 4 ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net