ಇದೆಂಥಾ ದುರ್ಬುದ್ಧಿ... ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

1140063
Published on

ಮಂಗಳೂರು: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ಗೆ ದಾರಿ ಬಿಡದೆ ಕಾರು ಚಾಲಕನೊಬ್ಬ ಕಿಲೋಮೀಟರ್ ದೂರದವರೆಗೂ ತೊಂದರೆ ಕೊಟ್ಟಿರುವ ವಿಡಿಯೋ ವೈರಲ್​ ಆಗಿದೆ.

ಇಂತಹ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ರಸ್ತೆಯಲ್ಲಿ ಸೋಮವಾರ ಸಂಜೆ ನಡೆದಿದೆ. ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿಯಾದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ಗೆ ಅಡ್ಡವಾಗಿ KA19, MJ 8924 ನಂಬರಿನ ಎರ್ಟಿಗಾ ಕಾರನ್ನು ಚಲಾಯಿಸಿ ತೊಂದರೆ ಕೊಟ್ಟ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net