ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು

crime
Published on

ಬೆಂಗಳೂರು: ಯಶವಂತಪುರ ಸರ್ಕಲ್​ ಬಳಿ ಮುಂಜಾನೆ 3.45ರಲ್ಲಿ ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ.  ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ಮೇಲೆ ಡಿವೈಡರ್​​​ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net