ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ

car
ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಕಾರು
Published on

ಕಾರ್ಕಳ: ನಂದಳಿಕೆ ಬೋರ್ಡು ಶಾಲೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ನಂದಳಿಕೆ ಗ್ರಾಮದ ಬೋರ್ಡು ಶಾಲೆ ಬಳಿ ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು ತೊಂದರೆ ಉಂಟಾಯಿತು. ಕಾರು ಸಂಪೂರ್ಣ ಜಖಂಗೊಂಡಿದ್ದು ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net