ದಾವಣಗೆರೆಯಲ್ಲಿ ಕಾರು-ಸ್ಕೂಟಿ ಡಿಕ್ಕಿ: ದಂತ ವೈದ್ಯಕೀಯ ಪಿಜಿ ವಿದ್ಯಾರ್ಥಿನಿ ಸಾವು

accident (2)
Published on

ದಾವಣಗೆರೆ: ನಗರದ ಎಂಸಿಸಿ 'ಬಿ' ಬ್ಲಾಕ್​ ಈಜುಕೊಳದ ಬಳಿ ಗುರುವಾರ ಬೆಳಗ್ಗೆ ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಗುಜರಾತ್​ನ ಉಮ್ರಾಗಾಂವ್​ನ ಪ್ರಿಯಾಂಕಾ (26) ಸಾವಿಗೀಡಾದ ಯುವತಿ. ದಾವಣಗೆರೆಯ ಕಾಲೇಜ್​ ಆಫ್​ ಡೆಂಟಲ್​ ಸೈನ್ಸಸ್​ನಲ್ಲಿ ಪಿಜಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಪ್ರಿಯಾಂಕಾ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಕಾರಿನಲ್ಲಿ ಸ್ನಾತಕೋತ್ತರ ವೈದ್ಯಕಿಯ ವಿದ್ಯಾರ್ಥಿಯೊಬ್ಬ ಬರುತ್ತಿದ್ದ. ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು, ಪ್ರಿಯಾಂಕಾ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net