

ಉಪ್ಪಿನಂಗಡಿ: ಮರ ಅಕ್ರಮ ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಉಪ್ಪಿನಂಗಡಿ ಅರಣ್ಯ ಇಲಾಖಾಧಿಕಾರಿಗಳು, ಮರ ಸಾಗಾಟದ ಲಾರಿ ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಸರ್ಕಾರಿ ರಕ್ಷಿತಾರಣ್ಯದಿಂದ ಕಡಿದಿರಬಹುದಾದ ಮರದ ದಿಮ್ಮಿಗಳನ್ನು ಹೊತ್ತು ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ಉಪ್ಪಿನಂಗಡಿಯ ಮಠ ಎಂಬಲ್ಲಿ ಪತ್ತೆಹಚ್ಚಿದ ಅಧಿಕಾರಿಗಳು, ಲಾರಿ ಚಾಲಕ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮ ನಿವಾಸಿ ನಿಖಿಲ್ ಸಂಗಮ್ ಎಂಬಾತನನ್ನು ವಶಕ್ಕೆ ಪಡೆದು ಲಾರಿ ಸಹಿತ ಮರದ ದಿಮ್ಮಿಗಳನ್ನು ಮುಟ್ಟುಗೋಲು ಹಾಕಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್, ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ್, ಫಾರೆಸ್ಟರ್ ವಿನಯಚಂದ್ರ, ತೇಜ ಕುಮಾರ್, ಕಿಶೋರ್ ಭಾಗವಹಿಸಿದ್ದರು.