ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ, ಇಬ್ಬರಿಗೆ 25 ವರ್ಷ ಜೈಲು, 3 ಲಕ್ಷ ರೂ. ದಂಡ

High court logo
Published on

ಹಾವೇರಿ: ಅಪ್ರಾಪ್ತಳ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಇಬ್ಬರು ಬಾಲ ಅಪರಾಧಿಗಳಿಗೆ 25 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಿ ಇಲ್ಲಿಯ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ನಿಂಗೌಡ ಪಾಟೀಲ ಶುಕ್ರವಾರ ತೀರ್ಪ ನೀಡಿ ಆದೇಶ ಹೊರಡಿಸಿದ್ದಾರೆ.

2016ರ ನವೆಂಬರ್ 19ರಂದು ಇಬ್ಬರು ಬಾಲಕರು ರಾಣೆಬೆನ್ನೂರ ನಗರದ ಮನೆಯೊಂದರಲ್ಲಿದ್ದ 14 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಎಸಗಿ ಕುತ್ತಿಗೆಗೆ ಚಾಕೂವಿನಿಂದ ಚುಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ತ್ರ್ಯಾಧಾರಗಳ ಸಮೇತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹಾಗೂ ಬಾಲಕರು ಸದ್ಯ ವಯಸ್ಕರಾಗಿರುವ ಕಾರಣ ನ್ಯಾಯಾಧೀಶರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಅಲ್ಲದೆ, ಸರ್ಕಾರ ಮೃತ ಬಾಲಕಿಯ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net