ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದವನ ಬಂಧನ

Published on


ಚಾಮರಾಜನಗರ: ಜಿಲ್ಲೆ ಮದ್ದೂರಿನ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.


ಕೊಳ್ಳೆಗಾಲ ತಾಲೂಕಿನ ಹಂಪಾಪುರ ಗ್ರಾಮದ ಮಹೇಶ ಅವರ ಪುತ್ರ ಶಿವು (21) ಬಂಧಿತ ಆರೋಪಿ. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಮದ್ದೂರು ಪೊಲೀಸರು ಆರೋಪಿ ಶಿವು ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ವಿಶೇಷ ನ್ಯಾಯಾಲಯದ ಎದುರು ಬುಧವಾರ ರಾತ್ರಿ ಹಾಜರುಪಡಿಸಿದರು. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಯನ್ನು ನ್ಯಾಯಾಧೀಶರ ಆದೇಶದಂತೆ ಮಂಡ್ಯ ಸ್ವಾಧಾರ ಕೇಂದ್ರದ ವಶಕ್ಕೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net