

ಹಿರಿಯೂರು: ಮಣಿಪುರದಲ್ಲಿ ಮಹಿಳೆಯರ ಅರೆಬೆತ್ತಲೆ ಮೆರವಣಿಗೆ, ಚಿತ್ರದುರ್ಗದ ಕವಾಡಿಗರಹಟ್ಟಿ ದುರಂತ, ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಬಳಿಕ ತಾಲೂಕು ಕಚೇರಿಗೆ ತೆರಳಿ ಗ್ರೇಡ್ 2 ತಹಸೀಲ್ದಾರ್ ಕೃಷ್ಣಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ರಾಘವೇಂದ್ರ, ರಾಮಚಂದ್ರ, ದಾದಾಪೀರ್, ಗೋವಿಂದಪ್ಪ ಇತರರಿದ್ದರು.